2025-26ನೇ ಸಾಲಿನ ಆಯ-ವ್ಯಯ ಭಾಷಣದಲ್ಲಿ ರಾಜ್ಯ ಸರ್ಕಾರವು ಘೋಷಿಸಿರುವಂತೆ, ಪಂಚಾಯತ್ ರಾಜ್ ಸಂಸ್ಥೆಯ ಅಧಿಕಾರಿಗಳಿಂದ, ಗ್ರಾಮ ಪಂಚಾಯಿತಿಗಳನ್ನು ದತ್ತು ಪಡೆದು ಸಮಗ್ರವಾಗಿಅಭಿವೃದ್ಧಿಪಡಿಸುವ ಕಾರ್ಯಕ್ರಮಕ್ಕೆ ಚಾಲನೆನೀಡಲಾಗಿದೆ. ಅದರಂತೆ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ವಿವಿಧ ಸ್ತರದ ಅಧಿಕಾರಿಗಳು ನಿಗದಿತಮಾನದಂಡಗಳಂತೆ, ಗ್ರಾಮ ಪಂಚಾಯಿತಿಗಳನ್ನು ದತ್ತುಪಡೆದು ಅಭಿವೃದ್ಧಿಪಡಿಸುವುದು ಕಾಯಕ ಗ್ರಾಮದ ಉದ್ದೇಶವಾಗಿದೆ.
RDPRಇಲಾಖೆಯ ಪಂಚತಂತ್ರ 2.0 ತಂತ್ರಾಂಶದ GRAMA PANCHAYAT PERFORMANCE RANKING REPORTನಲ್ಲಿ ಕೊನೆಯ ಸ್ಥಾನದಲ್ಲಿರುವ ಗ್ರಾಮ ಪಂಚಾಯಿತಿಗಳನ್ನುಅಧಿಕಾರಿಗಳು ಆಯ್ಕೆ ಮಾಡಿಕೊಳ್ಳಬೇಕು. ರಾಜ್ಯ,ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಮಟ್ಟದ ಅಧಿಕಾರಿಗಳು ಕ್ರಮವಾಗಿ ಪ್ರತ್ಯೇಕವಾಗಿ ತಲಾ 2 ಗ್ರಾಮ ಪಂಚಾಯಿತಿಗಳನ್ನುಆಯ್ಕೆ ಮಾಡಿಕೊಳ್ಳುತ್ತಾರೆ.