ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು.
3 ಆ ಕಾಲದಲ್ಲಿ ಮಹಾಯಾಜಕರೂ ಪ್ರಜೆಯ ಹಿರಿಯರೂ ಕಾಯಫನೆಂಬ ಮಹಾಯಾಜಕನ ಮಠಕ್ಕೆ ಕೂಡಿಬಂದು
4 ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲಬೇಕೆಂಬದಾಗಿ ಆಲೋಚನೆಮಾಡಿಕೊಂಡರು.