ಆಗ ಅವನಿಗೆ ಯೆಹೋವನಿಂದ - ಎಲೀಯನೇ, ನೀನು ಇಲ್ಲೇನು ಮಾಡುತ್ತೀ ಎಂಬ ವಾಣಿಯು ಕೇಳಿಸಿತು. ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು. 1 Kings / 1 ಅರಸುಗಳು 19 : 10