ಆಗ ದೂತನು ಆ ಹೆಂಗಸರಿಗೆ - ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ಹುಡುಕುತ್ತೀರೆಂದು ಬಲ್ಲೆನು; ಆತನು ಇಲ್ಲಿ ಇಲ್ಲ;
6 ತಾನು ಹೇಳಿದಂತೆ ಎದ್ದಿದ್ದಾನೆ; ಬನ್ನಿ, ಆತನು ಮಲಗಿದ್ದ ಸ್ಥಳವನ್ನು ನೋಡಿರಿ;
7 ಮತ್ತು ಬೇಗ ಹೋಗಿ ಆತನ ಶಿಷ್ಯರಿಗೆ - ಸತ್ತವನು ಬದುಕಿದ್ದಾನೆ, ಆತನು ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ, ಅಲ್ಲಿ ಆತನನ್ನು ಕಾಣುವಿರಿ ಎಂದು ತಿಳಿಸಿರಿ; ನಾನು ನಿಮಗೆ ಹೇಳಿದ್ದೇನೆ, ನೋಡಿರಿ ಎಂದು ಹೇಳಿದನು.