ಈ ವಿಶ್ವದಲಿ ನೋಡಲೆಲ್ಲರೆಲ್ಲರ ನಂಟು |
ಆವನಾ ಬಂಧುತೆಯ ಜಡೆಯ ಬಿಡಿಸುವನು? ||
ಜೀವ ಜೀವಕೆ ನಂಟು ಜಡ ಚೇತನಕೆ ನಂಟು |
ಆವುದದಕಂಟಿರದು? – ಮಂಕುತಿಮ್ಮ|| 72
ವಿಶ್ವದಲಿ = ಜಗತ್ತಿನಲಿ, ನೋಡಲೆಲ್ಲರೆಲ್ಲರ = ನೋಡಲು+ಎಲ್ಲರ+ಎಲ್ಲರ, ನತು + ಬಾಂಧವ್ಯ, ಆವನಾ = ಯಾರು, ಬಂಧುತೆಯ=ಈಬಂಧನದ,
ಆವುದದಕಂಟಿರದು = ಯಾವುದಕ್ಕೆ ಅಂಟಿರದು?
ತರಣಿ ಕಿರಣದ ನಂಟು ಗಗನ ಸಲಿಲದ ನಂಟು |
ಧರಣಿ ಚಲನೆಯ ನಂಟು ಮರುತನೊಳ್ ನಂಟು ll
ಪರಿಪರಿಯ ನಂಟುಗಳಿನೊಂದು ಗಂಟೀ ವಿಶ್ವ |
ಕಿರಿದು ಪಿರಿದೊಂದಂಟು – ಮಂಕುತಿಮ್ಮ || 71
ತರಣಿ = ಸೂರ್ಯ ಸಲಿಲ = ನೀರು, ಮರುತ = ಗಾಳಿ, ಕಿರಿದು = ಸಣ್ಣದು, ಪಿರಿದು = ದೊಡ್ಡದು.
ನಂಟು ತಂಟೆಗಳ ಗಂಟೀ ಬ್ರಹ್ಮಭಂಡಾರ |
ಅಂಟಿಲ್ಲವೆನಗಿದರೊಳೆನ್ನದಿರದೆಂದುಂ ||
ಒಂಟಿ ನೀನೊಳಜಗಕೆ ಭಂಟ ಹೊರಜಗಕಾಗಿ |
ಒಂಟಿಸಿಕೊ ಜೀವನವ – ಮಂಕುತಿಮ್ಮ || 73