Quran In Kannada

Surah 90 Al-Balad ಅಧ್ಯಾಯ 90: ಅಲ್ ಬಲದ್ (ನಗರ)


Listen Later

ಅಧ್ಯಾಯ 90: ಅಲ್ ಬಲದ್ (ನಗರ)
ಸೂಕ್ತ : 1
ಇಲ್ಲ, ನಾನು ಈ ನಗರದ ಆಣೆ ಹಾಕುತ್ತೇನೆ.
ಸೂಕ್ತ : 2
ನೀವು ಇದೇ ನಗರದಲ್ಲಿ ಇರುವವರು.
ಸೂಕ್ತ : 3
ತಂದೆಯ (ಆದಮರ) ಮತ್ತು ಅವರ ಸಂತತಿಯ ಆಣೆ.
ಸೂಕ್ತ : 4
ನಾವು ಮನುಷ್ಯನನ್ನು ಇಕ್ಕಟ್ಟಿನಲ್ಲಿರುವವನಾಗಿ ಸೃಷ್ಟಿಸಿದ್ದೇವೆ.
ಸೂಕ್ತ : 5
ತನ್ನ ಮೇಲೆ ಯಾರಿಗೂ ನಿಯಂತ್ರಣವಿಲ್ಲವೆಂದು ಅವನು ಭಾವಿಸಿದ್ದಾನೆಯೇ?
ಸೂಕ್ತ : 6
ನಾನು ಬಹಳಷ್ಟು ಸಂಪತ್ತನ್ನು ವ್ಯರ್ಥಗೊಳಿಸಿದ್ದೇನೆ ಎಂದವನು ಹೇಳುತ್ತಾನೆ.
ಸೂಕ್ತ : 7
ಅವನೇನು, ತನ್ನನ್ನು ಯಾರೂ ನೋಡಿಲ್ಲವೆಂದು ಭಾವಿಸಿದ್ದಾನೆಯೇ?
ಸೂಕ್ತ : 8
ನಾವೇನು ಅವನಿಗೆ ಎರಡು ಕಣ್ಣುಗಳನ್ನು ನೀಡಿಲ್ಲವೇ?
ಸೂಕ್ತ : 9
ನಾಲಿಗೆ ಹಾಗೂ ಎರಡು ತುಟಿಗಳನ್ನು ನೀಡಿಲ್ಲವೇ?
ಸೂಕ್ತ : 10
ಮತ್ತು ಅವನಿಗೆ ಎರಡು ದಾರಿಗಳನ್ನು ತೋರಿಸಿಲ್ಲವೇ?
ಸೂಕ್ತ : 11
ಆದರೆ ಅವನು ಏರು ಹಾದಿಯನ್ನು ಕ್ರಮಿಸಲು ನಿರಾಕರಿಸಿದನು.
ಸೂಕ್ತ : 12
ನಿಮಗೇನು ಗೊತ್ತು ಆ ಏರು ಹಾದಿ ಏನೆಂದು?
ಸೂಕ್ತ : 13
(ದಾಸ್ಯದಲ್ಲಿರುವವರ) ಕೊರಳನ್ನು ಬಿಡಿಸುವುದು.
ಸೂಕ್ತ : 14
ಅಥವಾ ಹಸಿವಿನ ದಿನ ಉಣಿಸುವುದು.
ಸೂಕ್ತ : 15
ಸಂಬಂಧಿಕನಾಗಿರುವ ಅನಾಥನನ್ನು ಪೋಷಿಸುವುದು.
ಸೂಕ್ತ : 16
ಸಂಕಷ್ಟದಲ್ಲಿರುವ ಬಡವನಿಗೆ ನೆರವಾಗುವುದು.
ಸೂಕ್ತ : 17
(ಇದನ್ನು ಮಾಡಿದವನು) ವಿಶ್ವಾಸಿಗಳ, ಪರಸ್ಪರ ಸಹನೆಯನ್ನು ಬೋಧಿಸುವವರ ಹಾಗೂ ಪರಸ್ಪರ ಕರುಣೆಯನ್ನು ಬೋಧಿಸುವವರ ಸಾಲಿಗೆ ಸೇರಿರಬೇಕು.
ಸೂಕ್ತ : 18
ಅವರೇ ಬಲ ಭಾಗದವರು (ಸೌಭಾಗ್ಯವಂತರು).
ಸೂಕ್ತ : 19
ಇನ್ನು, ನಮ್ಮ ವಚನಗಳನ್ನು ಧಿಕ್ಕರಿಸಿದವರೇ ಎಡಭಾಗದವರು (ಭಾಗ್ಯಹೀನರು).
ಸೂಕ್ತ : 20
ಅವರನ್ನು ನರಕಾಗ್ನಿಯಲ್ಲಿ ಮುಚ್ಚಿ ಬಿಡಲಾಗುವುದು.
(via) Quran in Kannada(ಕನ್ನಡದಲ್ಲಿ ಕುರ್ ಆನ್) app
https://play.google.com/store/apps/details?id=com.nzymic.kquran
...more
View all episodesView all episodes
Download on the App Store

Quran In KannadaBy Quran Kannada Podcast